ಗುಬ್ಬಿ ತಾಲೂಕಿನ ಬಿದರೆ ಹಳ್ಳ ಕಾವಲ್ ಎಚ್ ಎ ಎಲ್ ಘಟಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಅರಗ ಜ್ಞಾನೇಂದ್ರ ಭೇಟಿ

ಗುಬ್ಬಿ : ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಎಚ್ ಎಎಲ್ ನ ನೂತನ ಲಘು ಹೆಲಿಕಾಪ್ಟರ್ ಉತ್ಪಾದನಾ ಘಟಕವನ್ನು ಫೆಬ್ರವರಿ 6 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ, ಉತ್ಪಾದನಾ ಘಟಕದ ಆವರಣದಲ್ಲಿ ಸಿದ್ಧತೆಗಳನ್ನು ಪರಿಶೀಲಿಸಲು,ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಅರಗ ಜ್ಞಾನೇಂದ್ರ, ಮಾನ್ಯ ಸಂಸದರಾದ ಬಸವರಾಜ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್,ತುಮಕೂರು ನಗರದ ಶಾಸಕರಾದ ಜ್ಯೋತಿ ಗಣೇಶ್ ವಿಧಾನಪರಿಷತ್ ಸದಸ್ಯರಾದ ಕೇಶವ ಪ್ರಸಾದ್, ಚಿದಾನಂದ ಗೌಡ, ಜಿಲ್ಲಾ ರಕ್ಷಣಾಧಿಕಾರಿ ರಾಹುಲ್ ಕುಮಾರ್ , ಎಚ್ ಎಎಲ್ ನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.