ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಹಭಾಗಿತ್ವದಲ್ಲಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ದೃಷ್ಠಿಕೋನ, ವಿಜ್ಞಾನದಲ್ಲಿ ಆಸಕ್ತಿ ಮೂಡಿಸಲು, ಮತ್ತು ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಲು ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯ ಮಟ್ಟದ ವಿಜ್ಞಾನ ಮೇಳವನ್ನು(Science Exhibition) ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ತ್ರಿಪುರವಾಸಿನಿ ಸಭಾಂಗಣದಲ್ಲಿ ದಿ: 27.01.2023 & 28.01.2023 ರಂದು ಆಯೋಜಿಸಲಾಗಿದೆ.
ಈ ರಾಜ್ಯಮಟ್ಟದ ವಿಜ್ಞಾನ ಮೇಳವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದ್ದಾರೆ,
ವಿದ್ಯಾರ್ಥಿಗಳು ಪ್ರಸ್ತುತ ಪಡಿಸುವ ವಿಜ್ಞಾನ ಮಾದರಿಗಳನ್ನು ವೀಕ್ಷಿಸಿ, ವಿದ್ಯಾರ್ಥಿಗಳ ಸುಪ್ತಚೇತನದಲ್ಲಿರುವ ವೈಜ್ಞಾನಿಕ ಮನೋಭವಾವನೆ, ಪ್ರತಿಭೆಯನ್ನು ಪ್ರೋತ್ಸಾಹಿಸಿದ್ದಾರೆ ಈ ಕಾರ್ಯಕ್ರಮದಲ್ಲಿ ಸಚಿವರುಗಳು, ಶಾಸಕರುಗಳು, ಸಂಸದರು ಹಾಗೂ ಇನ್ನಿತರೆ ಗಣ್ಯರು ಅತಿಥಿಗಳಾಗಿ ಭಾಗವಹಿಸಿದ್ದಾರೆ
ಎರಡು ದಿನಗಳ ಈ ರಾಜ್ಯ ಮಟ್ಟದ ವಿಜ್ಞಾನ ಮೇಳದಲ್ಲಿ ವಿದ್ಯಾರ್ಥಿಗಳು ವಿಜ್ಞಾನ, ಗಣಿತ, ಮಾಹಿತಿ ತಂತ್ರಜ್ಞಾನ ಹಾಗೂ ಇನ್ನಿತರೆ ಕ್ಷೇತ್ರಗಳಿಗೆ ಸಂಬಂಧಿಸಿದ ನಾವಿನ್ಯಯುತ ಪ್ರಯೋಗಗಳನ್ನು ಸಿದ್ಧಪಡಿಸಿ ಪ್ರದರ್ಶಿಸುತ್ತಿದ್ದಾರೆ . ರಾಜ್ಯದ ವಿವಿಧ ಭಾಗಗಳಿಂದ ಆಯ್ಕೆಯಾಗಿರುವ 200 ವಸತಿ ಶಾಲೆಗಳ ವಿದ್ಯಾರ್ಥಿಗಳು ಮೇಳದಲ್ಲಿ ಭಾಗವಹಿಸಿದ್ದಾರೆ . ಈ ವಿದ್ಯಾರ್ಥಿಗಳಿಗೆ ಇಲಾಖೆ ವತಿಯಿಂದ ಸಾರಿಗೆ, ಊಟ –ವಸತಿ ಹಾಗೂ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಭಾರತೀಯ ಸೇನೆಯು ಸಹ ಈ ವಿಜ್ಞಾನ ಮೇಳದಲ್ಲಿ ಭಾಗವಹಿಸಿದೆ , ಆಕರ್ಷಕ ಶಸ್ತ್ರಾಸ್ತ್ರಗಳ ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಹಿರಿಯ ಸೇನಾಧಿಕಾರಿಗಳು ವಿದ್ಯಾರ್ಥಿಗಳಿಗೆ ಭಾರತೀಯ ಸೇನೆಯ ಕುರಿತು ಮಾಹಿತಿಯನ್ನು ನೀಡುತ್ತಿದ್ದಾರೆ .ವಿದ್ಯಾರ್ಥಿಗಳ ಮಾದರಿಗಳೊಂದಿಗೆ, ಪ್ರತಿಷ್ಟಿತ ವಿಜ್ಞಾನ ಸಂಸ್ಥೆಗಳಾದ ISRO, IISc, Agasthya Foundation, Bharatha Jnana Vignana samiti, Nehru planetarium etc ಇವರಿಂದ ಸಹ ಮಕ್ಕಳು ಹಾಗೂ ಶಿಕ್ಷಕರ ಜ್ಞಾನಾರ್ಜನೆಗೆ ಪೂರಕವಾದ ವಿಜ್ಞಾನದ ಪ್ರಯೋಗಗಳ ಪ್ರದರ್ಶನ/ಪ್ರಾತ್ಯಕ್ಷಿಕೆ ಯನ್ನು ಏರ್ಪಡಿಸಲಾಗಿದೆ.
ISRO ವತಿಯಿಂದ ಇತ್ತೀಚಿನ ರಾಕೇಟ್ ಗಳ ಮಾದರಿ, ಹೆಚ್ಎಎಲ್ ನಿಂದ ವಿಮಾನ ಹಾಗೂ ಹೆಲಿಕಾಪ್ಟರ್ ಮಾದರಿಗಳನ್ನು ಪ್ರದರ್ಶಿಸಲಾಗುತ್ತಿದೆ ವಿಜ್ಞಾನ ಮೇಳದಲ್ಲಿ ವಿಂಟೇಜ್ ಕಾರುಗಳ ಪ್ರದರ್ಶನವನ್ನು ಸಹ ಏರ್ಪಡಿಸಲಾಗಿದೆ.ಈ ರಾಜ್ಯ ಮಟ್ಟದ ವಿಜ್ಞಾನ ಮೇಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಅವಕಾಶವನ್ನು ಕಲ್ಪಿಸಲಾಗಿದೆ.