ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನ್ಮದಿನ: ಶುಭಕೋರಿದ ಗಣ್ಯರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 63ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಕರ್ನಾಟಕದ 23ನೇ ಮುಖ್ಯಮಂತ್ರಿಯಾದ ಬಸವರಾಜ್ ಬೊಮ್ಮಾಯಿ ಅವರು ಅಪರೂಪದ ರಾಜಕಾರಣಿಗಳಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ಜನ್ಮದಿನದ ಅಂಗವಾಗಿ ಹಲವಾರು ರಾಜಕೀಯ ಗಣ್ಯರು ಶುಭಹಾರೈಸಿದ್ದಾರೆ.

‘ಅರ್ಥಶಾಸ್ತ್ರದಲ್ಲಿ ಆಧ್ಯಾತ್ಮ ಕಾಣಬೇಕು. ಆಧ್ಯಾತ್ಮದಲ್ಲಿ ಅರ್ಥಶಾಸ್ತ್ರ ಪಡೆಯಬೇಕು ಎಂಬ ಮೇರು ವಿಚಾರವಂತಿಕೆಯ ಸಮಚಿತ್ತದ ಪ್ರಜ್ಞಾವಂತ ಆಡಳಿತಗಾರ ನಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತಾ, ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಿ ನಾಡಿನ ಸೇವೆಗೆ ಇನ್ನಷ್ಟು ಶಕ್ತಿ ನೀಡಲಿ ಎಂದು ಹಾರೈಸುವೆ’ ಎಂದು ಸಚಿವ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

‘ಆತ್ಮೀಯರು ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ನೀಡಿ, ಹೆಚ್ಚು ಹೆಚ್ಚು ಜನಸೇವೆ ಮಾಡುವ ಶಕ್ತಿ ಕರುಣಿಸಲಿ ಎಂದು ಹಾರೈಸುತ್ತೇನೆ’ ಎಂದು ಸಚಿವ ಎಸ್ ಟಿ ಸೋಮಶೇಖರ್ ಗೌಡ ಟ್ವೀಟ್ ಮಾಡಿದ್ದಾರೆ.

ನಾಡಿನ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಅತ್ಯಂತ ಪರಿಣಾಮಕಾರಿ ಹಾಗೂ ಜನಪರ ಆಡಳಿತ ನೀಡುತ್ತಾ, ರಾಜ್ಯವನ್ನು ವಿಕಾಸದೆಡೆಗೆ ಕೊಂಡೊಯ್ಯುತ್ತಿರುವ ‘ಕಾಮನ್ ಮ್ಯಾನ್’ ಎಂಬ ಖ್ಯಾತಿಗೆ ಪಾತ್ರರಾಗಿರುವ ತಮಗೆ ದೇವರು ಉತ್ತಮ ಆಯುರಾರೋಗ್ಯ ದೀರ್ಘಾಯುಷ್ಯ ಕರುಣಿಸಲೆಂದು ಹಾರೈಸುತ್ತೇನೆ ಎಂದು ಬಿ ವೈ ವಿಜಯೇಂದ್ರ ಶುಭಕೋರಿದ್ದಾರೆ

ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರಾಗಿರುವ ಇವರು ಜನತಾ ದಳ (ಯು)ದೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. 2008ರಲ್ಲಿ ಪಕ್ಷ ತೊರೆದು ಕೇಸರಿ ಪಡೆ ಸೇರಿಕೊಂಡರು. ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕನಾಗಿಯೂ ಗುರುತಿಸಿಕೊಂಡಿದ್ದರು. ಬಳಿಕ ವಿವಿಧ ಇಲಾಖೆಗಳ ಖಾತೆಯನ್ನು ನಿಭಾಯಿಸಿದ ಇವರು ಯಡಿಯೂರಪ್ಪ ಅವರ ಉತ್ತರಾಧಿಕಾರಿಯಾಗಿ ನೇಮಕಗೊಂಡರು.