ಫೋಟೋಗ್ರಫಿ ಮತ್ತು ವಿಡಿಯೋಗ್ರಾಫಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ತುಮಕೂರು; ಎಸ್‌ಬಿಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಗ್ರಾಮೀಣ ನಿರುದ್ಯೋಗಿ ಯುವಕ,ಯುವತಿಯರಿಗಾಗಿ ಉಚಿತ ಊಟ ಮತ್ತು ವಸತಿಯೊಂದಿಗೆ 30 ದಿನಗಳ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ. ಕನ್ನಡ ಓದಲು ಹಾಗೂ ಬರೆಯಲು ಬರುವ 18 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಫೆ.6ರೊಳಗಾಗಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿಕೈಗಾರಿಕಾ ಪ್ರದೇಶ, ತುಮಕೂರು ನಿರ್ಮಿತಿ ಕೇಂದ್ರದ ಹತ್ತಿರ,ಅಥವಾ ದೂ.ವಾ.ಸಂ. 0816-2243386, ಮೊ.ಸಂ.9449173386,9738351048 ಸಂಪರ್ಕಿಸುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿಕೋರಿದ್ದಾರೆ.