ತುರುವೇಕೆರೆ ; ಫೆಬ್ರವರಿ 24 ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ತುರುವೇಕೆರೆ ತಾಲೂಕಿನ ಕಣತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರ ಕಣತೂರಿನಲ್ಲಿ ರಕ್ತದಾನ ಶಿಬಿರವನ್ನು ತಾಲೂಕು ಆರೋಗ್ಯಾಧಿಕಾರಿಗಳ ಸಹಾಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.

ದಿನಾಂಕ 24.02.2023ನೇ ಶುಕ್ರವಾರ ದಂದು ಬೆಳಗ್ಗೆ 10 ಗಂಟೆಗೆ ತಾಲೂಕು ಆಡಳಿತ ಆರೋಗ್ಯಾಧಿಕಾರಿ, ಕಣತೂರು ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಆಸ್ಪತ್ರೆ ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಕಾರ್ಯಕರ್ತರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಪ್ರಾರಂಬಮಾಡಲಾಗುವುದು.

18 ವರ್ಷ ಮೇಲ್ಪಟ್ಟವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಕ್ತದಾನ ಮಾಡಬಹುದು, ದಾನಿಗಳಿಗೆ ಉಚಿತವಾಗಿ ರಕ್ತದ ಗುಂಪು ಹಾಗೂ ಇತರೆ ರಕ್ತಪರೀಕ್ಷೆಗಳನ್ನು ಮಾಡಲಾಗುವುದು. ಸಂಗ್ರಹವಾದ ರಕ್ತವನ್ನು ಪರೀಕ್ಷೆ ನಡೆಸಿದ ನಂತರ ಜಿಲ್ಲಾ ಆಸ್ಪತ್ರೆಯಲ್ಲಿ ಅಗತ್ಯವಿರುವ ರೋಗಿಗಳಿಗೆ ಉಚಿತವಾಗಿ ನೀಡಲಾಗುವುದು,

ರಕ್ತದಾನಿಗಳು ಸ್ವಯಂಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಿ ಮಹಾದಾನಕ್ಕೆ ಪಾತ್ರರಾಗಬೇಕೆಂದು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ವಿನಂತಿಸಿದ್ದಾರೆ.