ಬೆಂಗಳೂರು: ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 24, 2023 ಕೊನೆಯ ದಿನವಾಗಿದ್ದು ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅಪ್ಲಿಕೇಶನ್ ಹಾಕಬೇಕು, ಒಟ್ಟು 71 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು ಪದವಿ ಹಾಗೂ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳು :
* ಇನ್ಕಮ್ ಟ್ಯಾಕ್ಸ್ ಇನ್ಸ್ಪೆಕ್ಟರ್ – 10
*ಟ್ಯಾಕ್ಸ್ ಅಸಿಸ್ಟೆಂಟ್ – 32
*ಮಲ್ಟಿ ಟಾಸ್ಕಿoಗ್ ಸ್ಟಾಫ್ – 29
ವಿದ್ಯಾರ್ಹತೆ : ಇನ್ಕಮ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಹಾಗೂ ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಪದವಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 18 ವರ್ಷದಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್ಸಿ /ಎಸ್ಟಿ ಅಭ್ಯರ್ಥಿಗಳಿಗೆ 10 ವರ್ಷ ಹಾಗೂ ಕ್ರೀಡಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ಸಂಬಳ :
* ಇನ್ಕಮ್ ಟ್ಯಾಕ್ಸ್ ಇನ್ಸ್ಪೆಕ್ಟರ್ – 44,900-1,42,400 ರೂ
* ಟ್ಯಾಕ್ಸ್ ಅಸಿಸ್ಟೆಂಟ್ – 25,500 – 81,100 ರೂ
* ಮಲ್ಟಿ ಟಾಸ್ಕಿಂಗ್ ಸ್ಟಾಪ್ – 18,000 – 56,900 ರೂ ಹುದ್ದೆಗಳ ಅನುಸಾರವಾಗಿ ಸಂಬಳವನ್ನು ನಿಗದಿಪಡಿಸಲಾಗಿದೆ.
ಫೆಬ್ರವರಿ 6 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಮಾರ್ಚ್ 24 / 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ಒದಗಿಸಲಾದ ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು ಮತ್ತು ಅಭ್ಯರ್ಥಿಗಳು ಸಹಿ ಮಾಡಿದ ಅರ್ಜಿ ನಮೂನೆಯನ್ನು ಸಲ್ಲಿಸಬೇಕಾಗುತ್ತದೆ, ಅಗತ್ಯ ದಾಖಲೆಗಳನ್ನು ದೃಢೀಕೃತ ಪತ್ರಗಳೊಂದಿಗೆ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಸ್ವೀಟ್ ಪೋಸ್ಟ್ ಅಥವಾ ನೊಂದಾಯಿತ ಅಂಚೆ ಮೂಲಕ ಮಾರ್ಚ್ 24 /2023 ಅಥವಾ ಅದಕ್ಕೂ ಮುಂಚಿತವಾಗಿ ತಲುಪುವಂತೆ ಕಳಿಸಬೇಕು.
Address :- commisioner of incometax, principal chief commisioner of income- tax, Karnataka and goa region, central revenue building, no1 queens Road, Bengaluru, Karnataka -560001