ತುಮಕೂರು : ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ದವಾಗುತ್ತಿರುವ ಬಿಜೆಪಿ ಪಕ್ಷವು ತಳ ಮಟ್ಟದಿಂದ ಬಲಶಾಲಿಯಾಗಿ ಬೆಳೆಯುತ್ತಿದೆ ಎಂದು ಆರಗ ಜ್ಞಾನೇಂದ್ರ ಇಂದು ಆಯೋಜಿಸಿದ್ದ ಸಮಾವೇಶದಲ್ಲಿ ಹೇಳಿದರು.
ಇಂದು ತುಮಕೂರು ಗ್ರಾಮಾಂತರ ಕ್ಷೇತ್ರಗಳಿಗೆ ಭೇಟಿ ನೀಡಿದ ತುಮಕೂರು ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಅವರು ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಕರೆ ನೀಡಿದರು .
ಈ ಸಂದರ್ಭದಲ್ಲಿ ಪಕ್ಷದ ಮಾಜಿ ಶಾಸಕ ಸುರೇಶ ಗೌಡ ಹಾಗೂ ಪಕ್ಷದ ಹಿರಿಯ ಮುಖಂಡರುಗಳು ಉಪಸ್ಥಿತರಿದ್ದರು.