ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೈವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಿಂದ ಮೈಸೂರು ಗೆ ಹೋಗುವ ಎಕ್ಸ್‌ಪ್ರೆಸ್‌ವೇ ಅನ್ನು ಉದ್ಘಾಟಸಿದರು.

119 ಕಿಮೀ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಯೋಜನೆಯು 6-10 ಲೇನ್ ಪ್ರವೇಶ ನಿಯಂತ್ರಿತ ಹೆದ್ದಾರಿಯಾಗಿದ್ದು, 8,480 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದು ಬೆಂಗಳೂರು ಮತ್ತು ಮೈಸೂರು ನಡುವಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ ಮತ್ತು ಅಂತಿಮವಾಗಿ ಪ್ರಯಾಣದ ಸಮಯವನ್ನು ಮೂರು ಗಂಟೆಗಳಿಂದ 75 ನಿಮಿಷಗಳಿಗೆ ಕಡಿಮೆ ಮಾಡುತ್ತದೆ.

ರಾಷ್ಟೀಯ ಹೆದ್ದಾರಿ ನಿಯಮಾನುಸಾರದ ಪ್ರಕಾರ ಶಿಸ್ತು ಬದ್ದವಾಗಿ ಸುರಕ್ಷತೆಗಳನ್ನು ಕೈಗೊಳ್ಳಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.