ನೂತನವಾಗಿ ಲೋಕಾರ್ಪಣೆಗೊಂಡ ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ;ವಿದ್ಯಾರ್ಥಿಗಳಿಗೆ ಉಚಿತವಾಗಿ ವೈದ್ಯಕೀಯ ಶಿಕ್ಷಣ

ಚಿಕ್ಕಬಳ್ಳಾಪುರ ತಾಲ್ಲೊಕಿನ ಮುದ್ದೇನಹಳ್ಳಿಯಲ್ಲಿ ಇರುವ ಸತ್ಯಸಾಯಿ ಗ್ರಾಮದಲ್ಲಿ ನೂತನವಾಗಿ ಸುಮಾರು 350 ಕೋಟಿ ರೂ ವೆಚ್ಚದಲ್ಲಿ ಮೆಡಿಕಲ್‌ ಕಾಲೇಜು ಅನ್ನು ನಿರ್ಮಿಸಲಾಗಿದೆ ಈ ವೈದ್ಯಕೀಯ ಕಾಲೇಜಿಗೆ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಎಂದು ನಾಮಕರಣ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ವೈದ್ಯಕೀಯ ಕಾಲೇಜನ್ನು ಲೋಕಾರ್ಪಣೆಮಾಡಿದ್ದಾರೆ.

ಒಟ್ಟು ನೂರು ಹಾಸಿಗೆಗಳನ್ನು ಈ ಮೆಡಿಕಲ್‌ ಕಾಲೇಜು ಹೊಂದಿದೆ ಹಾಗೂ ಪ್ರತಿವರ್ಷ ನೂರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ಮೆಡಿಕಲ್‌ ಸೀಟು ನೀಡಲಾಗುತ್ತದೆ, ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಅಧ್ಯಯನ ಸಾಮಗ್ರಿಗಳನ್ನು ಸಹ ಉಚಿತವಾಗಿ ನೀಡಲಾಗುತ್ತದೆ. ಆದರೆ ಉಚಿತವಾಗಿ ಮೆಡಿಕಲ್‌ ಸೀಟು ಪಡೆದ ವಿದ್ಯಾರ್ಥಿಗಳು ಇದೇ ಮೆಡಿಕಲ್‌ ಕಾಲೇಜಿನಲ್ಲಿ ಐದು ವರ್ಷ ವೈದ್ಯರಾಗಿ ಸೇವೆ ಸಲ್ಲಿಸಬೇಕು ಎಂದು ಕೆಲವು ಷರತ್ತುಗಳನ್ನು ಹಾಕಲಾಗಿದೆ.

ಮೆಡಿಕಲ್‌ ಕಾಲೇಜಿಗೆ ಹೊಂದಿಕೊಂಡಂತೆ ಈಗಾಗಲೇ 360 ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿದೆ ಅದರಲ್ಲಿ 30 ಹಾಸಿಗೆಗಳನ್ನು ತುರ್ತು ಚಿಕಿತ್ಸೆಗೆ ಮೀಸಲಿರಿಸಲಾಗಿದೆ. ಇಲ್ಲಿ ರೋಗಿಗಳಿಗೆ ಸಂಪೂರ್ಣ ಉಚಿತವಾಗಿ ವೈದ್ಯಕೀಯ ಸೇವೆ ನೀಡಲಾಗುತ್ತಿದೆ.