ವಿಜೃಂಭಣೆಯಿಂದ ಜರುಗಿದ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ

ತುಮಕೂರು : ಇತಿಹಾಸ ಪ್ರಸಿದ್ಧವಾಗಿರುವ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವವೂ ಇಂದು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ರಥೋತ್ಸವದ ಪ್ರಯುಕ್ತ ಆಂಜನೇಯ ಸ್ವಾಮಿಯವರಿಗೆ ವಿಶೇಷ ಪೂಜೆ ಅಲಂಕಾರವನ್ನು ಮಾಡಲಾಗಿತ್ತು, ಮಧ್ಯಾಹ್ನ 1:15ಕ್ಕೆ ಗರುಡ ರಥದ ಸುತ್ತ ಪ್ರದಕ್ಷಿಣೆ ಹಾಕಿದ ಬಳಿಕ ರಥೋತ್ಸವಕ್ಕೆ ಚಾಲನೆಯನ್ನು ನೀಡಲಾಯಿತು ಭಕ್ತಾದಿಗಳು ತಮ್ಮ ಇಷ್ಟರ್ಥ ಸಿದ್ಧಿಗಾಗಿ ರಥಕ್ಕೆ ಹೂವು, ಧವನ, ಬಾಳೆಹಣ್ಣುನ್ನು ಎಸೆಯುವ ಮೂಲಕ ತಮ್ಮ ಹರಕೆಯನ್ನು ಸಲ್ಲಿಸಿದರು.

ಆಂಜನೇಯ ಸ್ವಾಮಿಯ ರಥೋತ್ಸವದ ಹಿನ್ನೆಲೆಯಲ್ಲಿ ನಗರದ ಹೊರವಲಯದಲ್ಲಿರುವ ಶೆಟ್ಟಿಹಳ್ಳಿಗೆ ಹೋಗುವ ರಸ್ತೆಯುದ್ಧಕ್ಕೂ ಪಾನಕ,ಕೋಸಂಬರಿ, ಮಜ್ಜಿಗೆ ಹಾಗೂ ಊಟದ ವ್ಯವಸ್ಥೆಯನ್ನು ಭಕ್ತಾದಿಗಳು ಮಾಡಿದ್ದರು.