ತುಮಕೂರು : ವಿಧಾನಸಭಾ ಚುನಾವಣೆ ಮೇ 10 ರಂದು ಇರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಚುನಾವಣೆ ಅಕ್ರಮವನ್ನು ತಡೆಯಲು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ರವರು ಕಂಟ್ರೋಲ್ ರೂಂ ಅನ್ನು ಸ್ಥಾಪಿಸಿದ್ದಾರೆ.
ಖಾಸಗಿ ಬಸ್, ಆಟೋ, ಕ್ಯಾಬ್ ವಾಹನ ಚಾಲಕರು ಹಾಗೂ ನಿರ್ವಾಹಕರು, ಮಾಲೀಕರಿಗೆ ಯಾವುದೇ ರೀತಿಯ ಅನುಮಾನಾಸ್ಪದವ್ಯಕ್ತಿಗಳು ಅನಧಿಕೃತವಾಗಿ ವಸ್ತುಗಳನ್ನು ವಾಹನಗಳಲ್ಲಿ ಸಾಗಿಸುವುದು ಕಂಡು ಬಂದಲ್ಲಿ ಕಂಟ್ರೋಲ್ ರೂಂ ಸಂಖ್ಯೆ 0816-2272928 ಈ ನಂಬರ್ ಗೆ ಕರೆ ಮಾಡಿ ಮಾಹಿತಿ ನೀಡುವಂತೆ ವಾಹನ ಚಾಲಕರು ಹಾಗೂ ನಿರ್ವಹಕರಿಗೆ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ರವರು ಸೂಚನೆ ನೀಡಿದ್ದಾರೆ.
ಕಂಟ್ರೋಲ್ ರೂಂ ಸಂಖ್ಯೆ = 0816-2272928