ಡಿ.ಕೆ. ಶಿವಕುಮಾರ್ ಹೆಲಿಕಾಪ್ಟರ್ ಗೆ ಬೆಂಕಿ ಅವಘಡ ! ಪ್ರಣಾಪಾಯದಿಂದ ಪಾರು

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಇದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ಆದ ವೇಳೆ ಹೆಲಿಪ್ಯಾಡ್ ಬಳಿ ಬೆಂಕಿ ಅವಘಡ ನೆಡೆದಿದೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕುಮಟಾ – ಅಂಕೋಲಾ ಕ್ಷೇತ್ರದ ಅಭ್ಯರ್ಥಿಯಾಗಿರುವ ನಿವೇದಿತ ಆಳ್ವ ಅವರ ಪರವಾಗಿ ಪ್ರಚಾರಕ್ಕೆ ಆಗಮಿಸಿದ್ದ ಡಿ.ಕೆ ಶಿವಕುಮಾರ್ ಅವರು ಇದ್ದಂತಹ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಅನಾಹುತ ನೆಡೆದಿದೆ, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಅದೃಷ್ಟವಶ ಯಾರಿಗೂ ಯಾವುದೇ ಪ್ರಾಣ ಹಾನಿಗಳಾಗಿಲ್ಲ.

ಎರಡು ದಿನಗಳ ಹಿಂದೆ ರಣಹದ್ದು ಬಡಿದಿತ್ತು.

ಎರಡು ದಿನಗಳ ಹಿಂದೆ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನಿಂದ ಮುಳುಬಾಗಿಲಿಗೆ ಹೋಗುತ್ತಿದ್ದ ಹೆಲಿಕಾಪ್ಟರ್ ಗೆ ಮಾರ್ಗ ಮಧ್ಯ ರಣಹದ್ದು ಒಂದು ಬಡಿದು ವಿಂಡ್ ಶೀಲ್ಡ್ ಹೊಡೆದು ಹೋಗಿತ್ತು, ತಕ್ಷಣವೇ ಹೆಲಿಕ್ಯಾಪ್ಟರ್ ಅನ್ನು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡಿದ್ದರು ಪೈಲೆಟ್ ನ ಸಮಯಪ್ರಜ್ಞೆಯಿಂದ ದೊಡ್ಡ ಅವಘಡ ತಪ್ಪಿತ್ತು, ಇದಾದ ಬಳಿಕ ಅವರು ತುಮಕೂರಿನ ನೊಣವಿನಕೆರೆಯ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.