ನೊಣವಿನಕೆರೆ ಕಾಡು ಸಿದ್ದೇಶ್ವರ ಮಠಕ್ಕೆ ಡಿ.ಕೆ.ಶಿವಕುಮಾರ್ ಭೇಟಿ

ತಿಪಟೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 136 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಪಟೂರು ತಾಲ್ಲೂಕಿನ ನೊಣವಿನಕೆರೆ ಕಾಡು ಸಿದ್ದೇಶ್ವರ ಮಠಕ್ಕೆ ಇಂದು ಭೇಟಿ ನೀಡಿದ್ದಾರೆ .

ಡಿ.ಕೆ. ಶಿವಕುಮಾರ್ ಅವರು ತಮಗೆ ರಾಜಕೀಯವಾಗಿ ಏಳಿಗೆ ಮತ್ತು ಸಂಕಷ್ಟ ಬಂದಾಗಲೆಲ್ಲ ಕಾಡು ಸಿದ್ದೇಶ್ವರ ಮಠಕ್ಕೆ ಆಗಮಿಸಿ ಅಜ್ಜಯ್ಯನ ದರ್ಶನ ಪಡೆಯುತ್ತಿರುತ್ತಾರೆ, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಜಯ ಸಾಧಿಸಿರುವುದರಿಂದ ಮಠಕ್ಕೆ ಭೇಟಿ ನೀಡಿ ಅಜ್ಜಯ್ಯನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಡಿ.ಕೆ.ಶಿವಕುಮಾರ್ ಅವರ ಸಿಎಂ ಆಗುವ ಕನಸು ಎಷ್ಟರಮಟ್ಟಿಗೆ ಫಲಿಸಲಿದೆ ಎಂದು ಕಾದು ನೋಡಬೇಕಿದೆ.