ಸಿದ್ದಗಂಗಾ ಮಠಕ್ಕೆ ಕುಟುಂಬ ಸಮೇತ ಬಿ. ವೈ.ವಿಜಯೇಂದ್ರ ಭೇಟಿ

ತುಮಕೂರು : ಬಿ. ವೈ. ವಿಜಯೇಂದ್ರ ಅವರು ಮೊದಲಬಾರಿಗೆ ಶಿಕಾರಿಪುರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ದಿಸಿ ವಿಜಯಶಾಲಿಯಾಗಿದ್ದು ಶ್ರೀಗಳ ಆಶೀರ್ವಾದ ಪಡೆಯಲು ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

ತಮ್ಮ ಕುಟುಂಬ ಸಮೇತ ಆಗಮಿಸಿದ ವಿಜಯೇಂದ್ರ ಅವರು ಹಿರಿಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ, ನಂತರ ಸಿದ್ದಲಿಂಗ ಶ್ರೀಗಳ ಆಶೀರ್ವಾದ ಪಡೆದರು.

ಸುದ್ದಿಗಾರಾರೊಂದಿಗೆ ಮಾತನಾಡಿದ ಬಿ. ವೈ. ವಿಜಯೇಂದ್ರ ಅವರು ನಮ್ಮ ತಂದೆಯವರು ಯಾವುದೇ ಒಳ್ಳೆಯ ಕೆಲಸ ಮಾಡುವ ಮುನ್ನ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆಯುವುದು ವಾಡಿಕೆ, ಹಾಗಾಗಿ ನಾನು ಕೂಡ ಮೊದಲಬಾರಿಗೆ ವಿಧಾನಸಭೆ ಪ್ರವೇಶಿಸುತ್ತಿರುವುದರಿಂದ ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ಹೇಳಿದರು. ಬಿಜೆಪಿ ಪಕ್ಷದ ಸೋಲಿನ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಪಕ್ಷದ ವರಿಷ್ಠರು ಮುಂದಿನ ದಿನಗಳಲ್ಲಿ ಯಾವ ರೀತಿ ಪಕ್ಷ ಸಂಘಟನೆ ಮಾಡಬೇಕೆಂದು ಚರ್ಚೆ ನೆಡೆಸುತ್ತಿದ್ದಾರೆ ಎಂದು ಹೇಳಿದರು.