ಆಶಾ ಕಾರ್ಯಕರ್ತೆಯರಿಗೆ 3-4 ತಿಂಗಳಿಂದ ಸಿಕ್ಕಿಲ್ಲ ವೇತನ

ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಸೇವೆ ಒದಗಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕಳೆದ ಮೂರ್ನಾಲ್ಕು ತಿಂಗಳಿಂದ ವೇತನವಿಲ್ಲದೆ ಜೀವನ ನಿರ್ವಹಣೆಗೆ ಕಷ್ಟಪಡುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಪ್ರಾಣವನ್ನು ಲೆಕ್ಕಿಸದೆ ಹಾಗೂ ಪ್ರತಿಯೊಂದು ಅರೋಗ್ಯ ಸೇವೆಗಳಲ್ಲಿ ಮುಂಚೂಣಿಯಲ್ಲಿ ನಿಂತು ಜನರಿಗೆ ಆರೋಗ್ಯ ಸೇವೆ ಒದಗಿಸುತ್ತಿರುವ ಆಶಾ ಕಾರ್ಯಕರ್ತೆಯರು ಕಳೆದ 3-4 ತಿಂಗಳಿಂದ ವೇತನವಿಲ್ಲದೆ ಕೆಲಸ ಮಾಡುತ್ತಿದ್ದಾರೆ.

ನೂತನ ಸರ್ಕಾರ ಈ ಬಗ್ಗೆ ಗಮನ ಹರಿಸಿ ಶೀಘ್ರವೇ ವೇತನ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸಂಯುಕ್ತ ಆಶಾ ಸಂಘ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ.

ಕುಟುಂಬ ನಿರ್ವಹಣೆ ಕಷ್ಟ: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಕಳೆದ 3-4 ತಿಂಗಳಿಂದ ರಾಜ್ಯ ಸರ್ಕಾರದ ಗೌರವಧನ ಮತ್ತು ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಬಿಡುಗಡೆಯಾಗಿಲ್ಲ. ಬಹುತೇಕ ಕೆಲಸದಿಂದಲೇ ಕುಟುಂಬ ಕಾರ್ಯಕರ್ತೆಯರು ಈ ನಿರ್ವಹಿಸುತ್ತಿದ್ದು, ಇದೀಗ ಶಾಲೆಗಳು ಪ್ರಾರಂಭವಾಗಿದ್ದು, ಶುಲ್ಕ ಪಾವತಿಸಲು ಸಾಧ್ಯವಾಗುತ್ತಿಲ್ಲ. ವೇತನ ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಲಿಲ್ಲ. ಸರ್ಕಾರ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕು ಎಂದು ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಒತ್ತಾಯಿಸಿದ್ದಾರೆ.

ನೀತಿ ಸಂಹಿತೆಯಿಂದ ವಿಳಂಬ: ಮಾರ್ಚ್ ಮತ್ತು ಏಪ್ರಿಲ್ ವೇತನ ಮಾತ್ರ ಜಮಾ ಆಗಿಲ್ಲ ಎಂದಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದರಿಂದ ಚುನಾವಣಾ ಆಯೋಗ ವೇತನ ತಡೆಹಿಡಿಯಲು ನಿರ್ದೇಶಿಸಿತ್ತು. ಆಶಾ ಕಾರ್ಯಕರ್ತೆಯರಿಗೆ 5 ಸಾವಿರ ವೇತನ ನೀಡಲಾಗುತ್ತಿತ್ತು ಆದರೆ ಈ ಹಿಂದಿನ ಬಿಜೆಪಿ ಸರ್ಕಾರ ಕಳೆದ ಬಜೆಟ್‌ನಲ್ಲಿ ಒಂದು ಸಾವಿರ ರೂ. ಹೆಚ್ಚಿಸಿದೆ. ಕಾರ್ಯವಿಧಾನದ ಪ್ರಕಾರ, ಪರಿಷ್ಕೃತ 6 ಸಾವಿರ ವೇತನ ನಮೂದಿಸಿ ಹೊಸ ಸರ್ಕಾರ ಆದೇಶ ಹೊರಡಿಸಬೇಕು ಎಂದು ಹೇಳಿದ್ದಾರೆ..