ಬೆಂಗಳೂರು : ಬಿಜೆಪಿ ಸರ್ಕಾರ ರದ್ದು ಮಾಡಿದ್ದ ಟಿಪ್ಪು ಸುಲ್ತಾನ್ ಜಯಂತಿಯನ್ನು ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಟಿಪ್ಪು ಜಯಂತಿಯನ್ನು ಆಚರಿಸಲು ಸಿದ್ಧತೆ ನಡೆಸುತ್ತಿದೆ, ಮತ್ತೆ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನೆಡೆಸುವ ಲಕ್ಷಣಗಳು ಕಂಡು ಬರುತ್ತಿದೆ.
ನವೆಂಬರ್ 10, 2015 ರಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ದಿನಾಚರಣೆಯನ್ನು ಆಚರಿಸಲು ಪ್ರಾರಂಭಿಸಿದ್ದರು ಆಗ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಿತ್ತು. ಆಂದೋಲನವು ಹಿಂಸಾತ್ಮಕ ಸ್ವರೂಪವನ್ನು ಪಡೆದುಕೊಂಡಿತ್ತು ಆಗ ಆದ ಘರ್ಷಣೆಯಲ್ಲಿ 60 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದರು.
ಬಿಜೆಪಿ ಹಾಗೂ ಹಿಂದುತ್ವ ಶಕ್ತಿಗಳು ಮತ್ತು ಕೊಡವ ಸಮುದಾಯದ ಜನರ ತೀವ್ರ ವಿರೋಧದ ನಡುವೆಯೂ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರವು ಟಿಪ್ಪು ಜಯಂತಿಯನ್ನು ಸರ್ಕಾರದ ಅಧಿಕೃತ ಕಾರ್ಯಕ್ರಮವಾಗಿ ಆಚರಿಸಿದ್ದರು.
2019ರಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಟಿಪ್ಪು ಜಯಂತಿ ಆಚರಣೆಯನ್ನು ನಿಷೇಧ ಮಾಡಿದರು. ಪಠ್ಯಪುಸ್ತಕಗಳಲ್ಲಿನ ಟಿಪ್ಪು ಸುಲ್ತಾನನ ವೈಭವೀಕರಣವನ್ನು ಬಿಜೆಪಿ ಸರ್ಕಾರ ತೆಗೆದುಹಾಕಿತ್ತು. ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯು ಟಿಪ್ಪು ಸುಲ್ತಾನ್ ಅನ್ನು “ಮೈಸೂರಿನ ಹುಲಿ” ಎಂದು ಕರೆಯಲ್ಪಡುವ ಬಿರುದನ್ನು ತೆಗೆದುಹಾಕಿತು.