ಬಿಜೆಪಿ ಪಾಳಯದಲ್ಲಿ ಬಿ. ಎಸ್. ಯಡಿಯೂರಪ್ಪ ನವರ ನಂತರ ಸಮರ್ಥ ನಾಯಕನಿಲ್ಲದೆ ಈ ಭಾರಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲನ್ನಪ್ಪಿದ್ದು ಇದೀಗ ರಾಜ್ಯಾಧ್ಯಕ್ಷರ ಬದಲಾವಣೆ ಕಾರ್ಯವನ್ನು ಆರಂಭಿಸಿದೆ, ಬಿ.ಎಸ್.ವೈ ಅವರ ಪುತ್ರ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲು ಪಕ್ಷದಲ್ಲಿ ಕೂಗು ಕೇಳಿಬರುತ್ತಿದೆ.
ಈ ಹಿಂದೆ ವಕೀಲರಾಗಿ ಕಯಾನಿರ್ವಹಿಸುತ್ತಿದ್ದ ಬಿ. ವೈ. ವಿಜಯೇಂದ್ರ ಅವರು ಬಿಜೆಪಿ ಯುವ ಮೋರ್ಚಾ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ 2020 ರಿಂದ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಚುನಾವಣೆ ಗೆಲ್ಲುವ ಚಾಣಕ್ಷತನ, ಪಕ್ಷ ಸಂಘಟನೆ, ಎಲ್ಲಾ ಸಮುದಾಯದ ಮತ ಸೆಳೆಯುವ ವ್ಯಕ್ತಿತ್ವ ಇರುವ ಬಿ. ವೈ.ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕೆಂದು ಒತ್ತಾಯ ಕೇಳಿ ಬರುತ್ತಿದೆ. ಮತ್ತೊಂದೆಡೆ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಮಾಜಿ ಡಿ. ಸಿ ಎಂ. ಆರ್. ಅಶೋಕ್,ಮಾಜಿ ಸಚಿವ ಅಶ್ವತ್ ನಾರಾಯಣ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಹೆಸರು ಸಹ ಕೇಳಿ ಬರುತ್ತಿದ್ದು, ಹೈಕಮಾಂಡ್ ವಲಯದಲ್ಲಿ ಸಿ. ಟಿ. ರವಿ ಹೆಸರು ಮುಂಚೂಣಿಯಲ್ಲಿದೆ ಎಂದು ಹೇಳಲಾಗುತ್ತಿದೆ.