ಬೆಂಗಳೂರು : ಅಧಿಕಾರ ವಹಿಸಿಕೊಂಡು 3 ವಾರಗಳಲ್ಲೇ ಆಡಳಿತ ಯಂತ್ರವನ್ನು ಚುರುಕುಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿನಕ್ಕೊಂದು ಇಲಾಖೆಗೆ ಬಿಸಿ ಮುಟ್ಟಿಸುತ್ತಿದ್ದಾರೆ ಮಂಗಳವಾರ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನೆಡೆಸಿದ ಅವರು ಆರೋಗ್ಯ ಅಭಿಯಾನದ ಉದ್ದೇಶ ತಾಲ್ಲೋಕು ಆಸ್ಪತ್ರೆಗಳಲ್ಲಿ ಎಂ.ಆರ್.ಐ ಹಾಗೂ ಡೈಯಾಲಿಸಿಸ್ ಯಂತ್ರಗಳನ್ನು ಅಳವಡಿಸದಿರುವುದಕ್ಕೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ರಾಷ್ಟೀಯ ಆರೋಗ್ಯ ಮಿಷನ್ ಅನುದಾನದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು, ಈ ಯೋಜನೆಯಡಿ ಶೇ. 52 ರಷ್ಟು ತಜ್ಞ ವೈಧ್ಯರ ಕೊರತೆಯಿದೆ,ಶೇ.31 ರಷ್ಟು ಎಂ.ಬಿ. ಬಿ.ಎಸ್ ವೈದ್ಯರ ಕೊರತೆಯಿದೆ ಹಾಗೂ ಶೇ.18 ರಷ್ಟು ನರ್ಸಗಳ ಕೊರತೆಯಿರುವುದನ್ನು ಗಮನಿಸಿದ ಮುಖ್ಯಮಂತ್ರಿಗಳು ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಮಾಡುವ ಬಗ್ಗೆ ಪರಿಶೀಲಿಸಿ, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.