ಉಪನ್ಯಾಸಕ ರಂಗನಾಥ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ! ತಿಪಟೂರು

ತಿಪಟೂರು : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ರಂಗನಾಥ್ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆಂದು ಕಾಲೇಜಿನ ವಿದ್ಯಾರ್ಥಿಗಳು ತರಗತಿಗೆ ಬಹಿಷ್ಕರಿಸಿ ಪ್ರತಿಭಟನೆ ನೆಡೆಸಿದರು.

ವಿದ್ಯಾರ್ಥಿನಿಯೊಂದಿಗೆ ಅಶ್ಲೀಲವಾಗಿ ಮೊಬೈಲ್ ಚಾಟಿಂಗ್ ಮಾಡಿರುವುದು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಪ್ರಾಂಶುಪಾಲರಿಗೆ ದೂರು ನೀಡಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಉಪನ್ಯಾಸಕರನ್ನು ಬಂಧಿಸಲೇಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆ ನೆಡೆಸಿದರು.

ಪ್ರತಿಭಟನೆಗೆ ಮಣಿದು ಸ್ಥಳಕ್ಕೆ ಬಂದ ಪ್ರಾಂಶುಪಾಲರು ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದರು ಆದರೆ ಪಟ್ಟು ಬಿಡದೆ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರೆಸುತ್ತಿದ್ದಾಗ, ಪೊಲೀಸರನ್ನು ಕರೆಸಿ ಉಪನ್ಯಾಸಕ ರಂಗನಾಥ್ ಅವರನ್ನು ಪೊಲೀಸರ ಜೊತೆ ಕಳುಹಿಸಲಾಯಿತು.