ಮಾವಿನಕೆರೆ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ ! 45 ಯುನಿಟ್ ಸಂಗ್ರಹ

ತುರುವೇಕೆರೆ : ಇಂದು ತುರುವೇಕೆರೆ ತಾಲ್ಲೋಕಿನ ಮಾವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರ ಮಾವಿನಕೆರೆ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಮಾವಿನಕೆರೆ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಗೂ ಆಶಾ ಕಾರ್ಯಕರ್ತೆಯರು ರಕ್ತದಾನ ಮಾಡಲು ಜನರಲ್ಲಿ ಮುಂಚಿತವಾಗಿಯೇ ಅರಿವನ್ನು ಮೂಡಿಸಿದ್ದರು, ಹಾಗೂ ವಿಷಯ ತಿಳಿದ ರಕ್ತಧಾನಿಗಳು ಸ್ವಯಂ ಪ್ರೇರಿತರಾಗಿ ಬಂದು ರಕ್ತದಾನ ಮಾಡಿದರು.

ಒಟ್ಟು 45 ಯೂನಿಟ್ ರಕ್ತಸಂಗ್ರಹಣೆಯಾಗಿದ್ದು ಇಂದು ರಕ್ತ ನಿಧಿ ಕೇಂದ್ರದಲ್ಲಿ ಪರೀಕ್ಷೆ ಮಾಡಿ ತುಮಕೂರು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಉಚಿತವಾಗಿ ನೀಡಲಾಗುತ್ತದೆ.

ಈ ಸಂದರ್ಭದಲ್ಲಿ ತಾಲ್ಲೊಕು ಆರೋಗ್ಯ ಅಧಿಕಾರಿಗಳಾದ ಡಾ. ಸುಪ್ರಿಯಾ, ಡಾ. ಗಂಗಾಧರ್, ತಾಲ್ಲೊಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬೋರೇಗೌಡ, ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಧರ, PHC ಯ ಎಲ್ಲಾ ಸಿಬ್ಬಂದಿ ವರ್ಗ, ರಕ್ತ ನಿಧಿ ಕೇಂದ್ರದ ತಂಡದವರು ಮತ್ತು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.