ತುಮಕೂರು ಜಿಲ್ಲಾಧಿಕಾರಿಯಾಗಿ ಶ್ರೀನಿವಾಸ್.ಕೆ ನೇಮಕ

ತುಮಕೂರು : ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಶ್ರೀನಿವಾಸ್ ಕೆ, ಐಎಎಸ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಕಳೆದ ವಾರ ತುಮಕೂರು ಜಿಲ್ಲಾಧಿಕಾರಿಯಾಗಿದ್ದ ವೈ.ಎಸ್ ಪಾಟೀಲ್ ಅವರನ್ನು ಕೃಷಿ ಇಲಾಖೆಯ ಆಯುಕ್ತರನ್ನಾಗಿ ಸರ್ಕಾರ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.

ತುಮಕೂರಿಗೆ ಜಿಲ್ಲಾಧಿಕಾರಿಯಾಗಿ ಬರಲು ಕೆಲ ಐಎಎಸ್ ಅಧಿಕಾರಿಗಳು ಪ್ರಯತ್ನ ಮಾಡಿದ್ದರು.ಆದರೆ ಈಗ ಅಂತಿಮವಾಗಿ ಈ ಹಿಂದೆ ಬೆಂಗಳೂರು ಜಿಲ್ಲಾಧಿಕಾರಿಯಾಗಿದ್ದ ಶ್ರೀನಿವಾಸ್ ಅವರನ್ನು ತುಮಕೂರು ಜಿಲ್ಲಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.

ಶ್ರೀನಿವಾಸ್ ರವರು ಸಹ ವೈ ಎಸ್ ಪಾಟೀಲ್ ರವರಂತೆ ಮೃದುಸ್ವಭಾವದ ಅಧಿಕಾರಿ ಎಂದು ಹೇಳಲಾಗುತ್ತಿದೆ.ರಾಜ್ಯದ ಎರಡನೆಯ ದೊಡ್ಡ ಜಿಲ್ಲೆ ಇದಾಗಿದ್ದು, ಸರ್ಕಾರದ ಯೋಜನೆಗಳನ್ನು ನಿರ್ಧಿಷ್ಟ ಸಮಯದಲ್ಲಿ ಅನುಷ್ಠಾನ ಮಾಡಿಸುವ ಜವಾಬ್ದಾರಿ ಇವರ ಮೇಲಿದೆ.