ವಿದ್ಯಾರ್ಥಿಗಳ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ತುಮಕೂರು : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 22-23ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಹಾಗೂ ತಾಂತ್ರಿಕ ಕೋರ್ಸುಗಳ ವಾರ್ಷಿಕ ಪರೀಕ್ಷೆಯಲ್ಲಿ ಶೇ. 60ಕ್ಕಿಂತ ಹೆಚ್ಚು ಅಂಕಗಳಿಸಿದ ಪ.ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಾವತಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 31, 2023 ಕೊನೆಯ ದಿನವಾಗಿರುತ್ತದೆ.

ಪಿಯುಸಿ ವಿದ್ಯಾರ್ಥಿಗಳಿಗೆ ರೂ. 20,000/-, ಪದವಿ ವಿದ್ಯಾರ್ಥಿಗಳಿಗೆ ರೂ. 25,000/-,ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ರೂ. 30,000/-, ವೃತ್ತಿಪರ ಕೋರ್ಸುಗಳಾದ ರೇಷ್ಮೆ, ವೈದ್ಯಕೀಯ, ಕೃಷಿ, ಇಂಜಿನಿಯರಿಂಗ್, ಇನ್ನಿತರೆ ತಾಂತ್ರಿಕ, ಕೋರ್ಸುಗಳಿಗೆ ರೂ. 35,000/- ಪ್ರೋತ್ಸಾಹಧನ ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿರುತ್ತದೆ ಎಂದು ಜಂಟಿ ನಿರ್ದೆಶಕರಾದ ಎಸ್.ಕೃಷ್ಣಪ್ಪ ತಿಳಿಸಿದ್ದಾರೆ.