ಅರಿವು ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ತುಮಕೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2023-24ನೇ ಸಾಲಿಗೆ CET/NEET ನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅರಿವು ಸಾಲಯೋಜನೆಯಡಿ ಸಾಲ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ವೈದ್ಯಕೀಯ(ಎಂ.ಬಿ.ಬಿ.ಎಸ್), ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಪ್ ಆರ್ಕಿಟೆಕ್ಚರ್, ಬಿ.ಆಯುಶ್, ಫಾರ್ಮಸಿ, ಕೃಷಿವಿಜ್ಞಾನ ಮತ್ತು ಪಶುವೈದ್ಯಕೀಯ ಕೋರ್ಸ್‌ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಖ್, ಪಾರ್ಸಿ)ರ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು ಸಾಲ ಪಡೆಯಲು ಆಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್‌ಸೈಟ್ kmdconline.karnataka.gov.in ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಿದ ಹಾರ್ಡ್ ಕಾಪಿ ಮತ್ತು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿರುವ ಇತರೆ ಮೂಲ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಜುಲೈ 10ರೊಳಗಾಗಿ ಸಲ್ಲಿಸಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನಾ ಆಜಾದ್‌ ಭವನ ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು ದೂ.ವಾ.ಸಂ. 0816-2281023ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.