ನಾನು ಕೂಡ ಮೋದಿಯವರ ಅಭಿಮಾನಿ ! ಏಲಾನ್ ಮಸ್ಕ್

ಅಮೆರಿಕ ಪ್ರವಾಸದಲ್ಲಿರುವ ಮೋದಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಟೆಸ್ಲಾ ಸಿಇಓ ಹಾಗೂ ಟ್ವಿಟ್ಟರ್ ಮಾಲೀಕರಾದ ಏಲಾನ್ ಮಸ್ಕ್, ನಾನು ಸಹ ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿ ಅವರು ಕೆಲವು ವರ್ಷಗಳ ಹಿಂದೆ ನಮ್ಮ ಕಾರ್ಖಾನೆಗೆ ಭೇಟಿ ನೀಡಿದ್ದರು ಇದರಿಂದಾಗಿ ಅವರ ಬಗ್ಗೆ ನನಗೆ ತಿಳಿದಿದೆ ಅವರು ನನಗೆ ಭಾರತಕ್ಕೆ ಆಮಂತ್ರಣ ನೀಡಿದ್ದಾರೆ ಶೀಘ್ರದಲ್ಲಿಯೇ ನಾನು ಭಾರತಕ್ಕೆ ಭೇಟಿ ನೀಡಲಿದ್ದೇನೆ ಎಂದು ಹೇಳಿದರು.

ನರೇಂದ್ರ ಮೋದಿಯವರು ನಿಜವಾಗಿಯೂ ಭಾರತದ ಬಗ್ಗೆ ಬಹಳಷ್ಟು ಕಾಳಜಿ ವಹಿಸುತ್ತಾರೆ ಅಲ್ಲದೆ ಅವರು ದೇಶದ ಭವಿಷ್ಯಕ್ಕೋಸ್ಕರ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಇದೇ ವರ್ಷದಲ್ಲಿ ಟೆಸ್ಲಾ ಕಾರ್ಖಾನೆಯನ್ನು ಭಾರತದಲ್ಲಿ ಸ್ಥಾಪಿಸಲು ಸ್ಥಳವನ್ನು ಗುರುತಿಸುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ನನಗೆ ಭರವಸೆ ನೀಡಿದ್ದಾರೆ.

ಸೌರಶಕ್ತಿ ಹೂಡಿಕೆಗೆ ಭಾರತ ಉತ್ತಮವಾಗಿದೆ, ನಾವು ಸ್ಟಾರ್ ಲಿಂಕ್ ಇಂಟರ್ನೆಟ್ ಅನ್ನು ಭಾರತಕ್ಕೆ ತರಲು ಸಹ ಆಶಿಸುತ್ತಿದ್ದೇನೆ, ಸಾಧ್ಯವಾದಷ್ಟು ಬೇಗ ಭಾರತದಲ್ಲಿ ಟೆಸ್ಲಾ ಸ್ಥಾಪಿಸಲು ಸಹಕಾರ ನೀಡುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.