ಹಿರಿಯ ನಾಗರಿಕರಿಗೆ ದೇವಸ್ಥಾನಗಳಲ್ಲಿ ನೇರವಾಗಿ ದೇವರ ದರ್ಶನಕ್ಕೆ ಅವಕಾಶ

ಹಿರಿಯ ನಾಗರಿಕರು ಇನ್ನು ಮುಂದೆ ದೇವಸ್ಥಾನದಲ್ಲಿ ಸರತಿ ಸಾಲಿನಲ್ಲಿ ನಿಲ್ಲದೆ ನೇರವಾಗಿಯೇ ದೇವರ ದರ್ಶನವನ್ನು ಪಡೆಯಬಹುದು ಎಂದು ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಆದೇಶವನ್ನು ಹೊರಡಿಸಿದೆ.

ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ಶ್ರೇಣಿಯ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟಿರುವ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದಕ್ಕೆ ತುಂಬಾ ತೊಂದರೆಯಾಗುತ್ತಿದ್ದು ಇದರಿಂದ ವಯಸ್ಸಿನ ಆಧಾರದ ಮೇಲೆ ಅವರಿಗೆ ಸರತಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ದರ್ಶನ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ.

65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ವಯಸ್ಸಿನ ಕುರಿತು ಧಾಖಲೆ ತೋರಿಸಿದ್ದಲ್ಲಿ ಅವರಿಗೆ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಬೇಕು, ದೇವಾಲಯದಲ್ಲಿ ಸ್ಥಳಾವಕಾಶ ಇದ್ದಲ್ಲಿ ಹಿರಿಯ ನಾಗರಿಕರಿಗೆಂದೇ ಪ್ರತ್ಯೇಕ ಸ್ಥಳ ಕಯ್ದಿರಿಸಬೇಕು ಎಂದು ಆದೇಶದಲ್ಲಿ ಉಲ್ಲೇಕಿಸಲಾಗಿದೆ.