ತುಮಕೂರು : ಕೃಷಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಇಂದು ರಾಜ್ಯದ ಹಲವೆಡೆ ಭ್ರಷ್ಟಾಚಾರ ಆರೋಪ ಮತ್ತು ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪಗಳ ಮೇಲೆ ಸರ್ಕಾರಿ ಅಧಿಕಾರಿಗಳ ನಿವಾಸ, ಕಛೇರಿ ಮತ್ತು ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆಯಿಂದಲೇ ದಾಳಿ ನೆಡೆಸಿ ದಾಖಲೆಗಳನ್ನು ವಶ ಪಡಿಸಿಕೊಂಡಿದ್ದಾರೆ.

ತುಮಕೂರು ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ರವಿ ಅವರು ವಾಸವಿರುವ ಶಂಕರಪುರಂ ನಗರದ ನಿವಾಸ ಮತ್ತು ರಾಮನಗರದಲ್ಲಿರುವ ಫಾರ್ಮ್ ಹೌಸ್ ಮೇಲೆ ಇಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನೆಡೆಸಿ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನೆಡೆಸುತ್ತಿದ್ದಾರೆ.