5 ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಸಂಪುಟದಲ್ಲಿ ನಿರ್ಧಾರ

ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದರು, ಆದರೆ ಕೇಂದ್ರ ಸರ್ಕಾರವು ಈಗಾಗಲೇ 5ಕೆಜಿ ಅಕ್ಕಿಯನ್ನು ಸಂಪೂರ್ಣ ಉಚಿತವಾಗಿ ರಾಜ್ಯದ ಜನರಿಗೆ ನೀಡುತ್ತಿದೆ, ರಾಜ್ಯ ಸರ್ಕಾರದವರು ಕೊಡಬೇಕಿದ್ದ 5ಕೆಜಿ ಅಕ್ಕಿ ಕೊರೆತೆಯಿರುವ ಕಾರಣದಿಂದ ಇನ್ನುಳಿದ 5 ಕೆಜಿ ಅಕ್ಕಿ ಬದಲಿಗೆ ಹಣವನ್ನು ಫಲಾನುಭವಿಗಳಿಗೆ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಒಬ್ಬರಿಗೆ 5ಕೆಜಿ ಅಕ್ಕಿ ನೀಡಲು ಅಕ್ಕಿಯ ಕೊರತೆ ಇದೆ. ಹಾಗಾಗಿ ಪ್ರತಿ ವ್ಯಕ್ತಿಗೆ ಒಂದು ಕೆಜಿ ಅಕ್ಕಿಗೆ 34 ರೂಗಳಂತೆ 170 ರೂಗಳನ್ನು ಪಡಿತರ ಚೀಟಿಯ ಮುಖ್ಯಸ್ಥರ ಖಾತೆಗೆ ಹಣವನ್ನು ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜುಲೈ ಒಂದರಿಂದ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿ ನೀಡಲಾಗುತ್ತದೆ ಮತ್ತು ಉಳಿದ 5 ಕೆಜಿ ಅಕ್ಕಿ ಬದಲು ಹಣ ಕೊಡಲಾಗುವುದು. ಬಿಪಿಎಲ್ ಕಾರ್ಡ್ನಲ್ಲಿ ಎಷ್ಟು ಪಲಾನುಭವಿಗಳಿರುತ್ತಾರೋ ಪ್ರತಿಯೊಬ್ಬರಿಗೂ 170 ರೂ ನೀಡಲಾಗುತ್ತದೆ ಮತ್ತು ಅಗತ್ಯವಿರುವಷ್ಟು ಅಕ್ಕಿ ಸಿಗುವ ತನಕವೂ ಇದೇ ರೀತಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ.