ತುರುವೇಕೆರೆ : ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಿಗೆ ಹಾಗೂ ತಾಲ್ಲೋಕು ಆರೋಗ್ಯಧಿಕಾರಿಗಳು ಮತ್ತು ಸಂಪಿಗೆ ಗ್ರಾಮ ಪಂಚಾಯಿತಿ , ಸಂಪಿಗೆ ಹೊಸಳ್ಳಿ, ಕೊಂಡಜ್ಜಿ ಇವರ ಸಹಯೋಗದೊಂದಿಗೆ ದಿನಾಂಕ 12-7-23ರ ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಿಗೆ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
18 ವರ್ಷ ಮೇಲ್ಪಟ್ಟ ಆರೋಗ್ಯವಂತರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಬಹುದು, ರಕ್ತದಾನ ಮಾಡಿದವರಿಗೆ ಉಚಿತವಾಗಿ ರಕ್ತದ ಗುಂಪು ಮತ್ತಿತರರು ರಕ್ತ ಪರೀಕ್ಷೆಗಳನ್ನು ತುಮಕೂರು ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ ಇವರ ವತಿಯಿಂದ ಮಾಡಲಾಗುತ್ತದೆ.
ರಕ್ತದಾನ ಶಿಬಿರದಲ್ಲಿ ಸಂಗ್ರಹಣೆಯಾಗುವ ರಕ್ತವನ್ನು ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ವಿವಿಧ ರಕ್ತ ಪರೀಕ್ಷೆಗಳನ್ನು ನೆಡೆಸಿ ಫಲಿತಾಂಶವು ಸರಿಯಾಗಿ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಧಾಖಲಾಗಿರುವ ಅವಶ್ಯವಿರುವ ರೋಗಿಗಳಿಗೆ ಉಚಿತವಾಗಿ ನೀಡಲಾಗುತ್ತದೆ.
ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಬಂದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ರಕ್ತದಾನ ಮಾಡಿ ಮಹಾದಾನಕ್ಕೆ ಪಾತ್ರರಾಗಬೇಕೆಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಮತ್ತು ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ವಿನಂತಿಸಿದ್ದಾರೆ.