ಮತದಾರರಿಗೆ ಆಮಿಷ ಪ್ರಕರಣ ! ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ

ಸಿಎಂ ಸಿದ್ದರಾಮಯ್ಯ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

ಐದು ಗ್ಯಾರಂಟಿ ಯೋಜನೆಗಳನ್ನು ಜನರ ಮುಂದಿಟ್ಟು ಅಧಿಕಾರದ ಚುಕ್ಕಾಣಿ ಇಡಿದಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಸಂಕಷ್ಟ ಎದುರಾಗುವ ಸಾಧ್ಯತೆಗಳು ಕಂಡುಬರುತ್ತಿದೆ.

ವರುಣಾ ಕ್ಷೇತ್ರದಿಂದ ಸ್ಪರ್ದಿಸಿದ್ದ ಸಿದ್ದರಾಮಯ್ಯ ಅವರು ಗ್ಯಾರಂಟಿಗಳ ಆಮಿಷವನ್ನು ಘೋಷಣೆ ಮಾಡಿ, ಗ್ಯಾರಂಟಿ ಕಾರ್ಡ್ ಗಳಿಗೆ ಸಹಿ ಮಾಡಿ ಮನೆ ಮನೆಗೆ ಹಂಚಿರುವ ಆಧಾರವನ್ನಿಟ್ಟುಕೊಂಡು ಇದೀಗ ವರುಣಾ ಕ್ಷೇತ್ರದ ಕೆ. ಎಂ. ಶಂಕರ್ ಎನ್ನುವವರು ಇಂದು ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿ, ಸಿದ್ದರಾಮಯ್ಯ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಜುಲೈ 28 ರಂದು ನ್ಯಾಯಾಲಯವು ಈ ಅರ್ಜಿಯ ವಿಚಾರಣೆಯನ್ನು ನೆಡೆಸಲಿದೆ.