ತುಮಕೂರು : ನಗರದ ಚಿಕ್ಕಪೇಟೆಯಲ್ಲಿರುವ ಕರ್ನಾಟಕ ಒನ್ ಸೆಂಟರ್ ನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಬೆಳ್ಳಂ ಬೆಳಗ್ಗೆಯಿಂದಲೇ ಮಳೆಯನ್ನೂ ಲೆಕ್ಕಿಸದೆ ಮಹಿಳೆಯರು ಸರತಿ ಸಾಲಿನಲ್ಲಿ ನಿಂತು ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಚಾಲ್ತಿಯಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಸೇವಾ ಕೇಂದ್ರಗಳ ಮುಂದೆ ಮಹಿಳೆಯರು ಬೆಳಗ್ಗೆ 5 ಗಂಟೆಯಿಂದಲೇ ಸಾಲುಗಟ್ಟಿ ನಿಂತಿರುವ ದೃಶ್ಯಗಳು ಕಂಡುಬರುತ್ತಿವೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕರಿಸಲು ಸಾಕಷ್ಟು ವ್ಯವಸ್ಥೆ ಮಾಡಿರುವುದಾಗಿ ಸರ್ಕಾರ ಹೇಳಿಕೊಂಡಿದ್ದರೂ ಸಹ ಅವ್ಯವಸ್ಥೆ ಮುಂದುವರೆದಿದೆ, ಎಂದು ಮಹಿಳೆಯರು ದೂರುತ್ತಿದ್ದಾರೆ, ಸಾಕಷ್ಟು ಸೇವಾ ಕೇಂದ್ರಗಳಲ್ಲಿ ಸರ್ವರ್ ಸರಿಯಾಗಿ ಕೆಲಸ ಮಾಡದಿದ್ದರಿಂದ ಹಲವೆಡೆ ಅರ್ಜಿ ಸಲ್ಲಿಸಲು ಮಹಿಳೆಯರು ಪರದಾಡುವಂತಾಗಿದೆ, ಅನೇಕ ಕೇಂದ್ರಗಳಲ್ಲಿ ನೂಕುನುಗ್ಗಲು, ಪ್ರತಿಭಟನೆಗಳು ಸಹ ನೆಡೆದಿವೆ.