ಗುಬ್ಬಿ HAL ಘಟಕದಿಂದ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕಟಣೆ

ನಿಟ್ಟೂರು : ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೋಕಿನ ಬಿದರೆಹಳ್ಳ ಕಾವಲ್ ನಲ್ಲಿ ಇರುವ HAL ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದಾರೆ.

ಹುದ್ದೆಗಳ ಭರ್ತಿಗಾಗಿ ಅಭ್ಯರ್ಥಿಗಳ ಪಟ್ಟಿಯು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಸಲ್ಲಿಕೆಯಗಲಿದ್ದು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅಗತ್ಯ ದಾಖಲಾತಿಗಳೊಂದಿಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ಐಟಿಐ, ಡಿಪ್ಲೋಮೋ ಹಾಗೂ ಯಾವುದೇ ಪದವಿ ಪಾಸಾಗಿರುವ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.

ಈಗಾಗಲೇ ಹೆಸರು ನೋಂದಾಯಿಸಿರುವ ಅಭ್ಯರ್ಥಿಗಳಿಗೆ ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ.

ಐಟಿಐ ಅಭ್ಯರ್ಥಿಗಳು ಎನ್ಐಸಿ, ಎಸ್ ಸಿ ವಿ ಟಿ , ಎಟಿಎಸ್ ನ ಪ್ರಮಾಣಪತ್ರವನ್ನು ಎಂಪ್ಲೋಯ್ಮೆಂಟ್ ಕಾರ್ಡ್ ಗೆ ಸೇರಿಸುವುದು ಕಡ್ಡಾಯವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೊರವಾಣಿ ಸಂಖ್ಯೆ 0816 – 2278488 ಗೆ ಸಂಪರ್ಕಿಸಿ.