ಭಾರತದ ಇಸ್ರೋ ವಿಜ್ಞಾನಿಗಳ ಪರಿಶ್ರಮದಿಂದ ಚಂದ್ರಯಾನ 3 ಇಂದು ಸಂಜೆ 6:04 ಸಮಯಕ್ಕೆ ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡಿಂಗ್ ಆಗಿದೆ.
ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡರ್ ಇಳಿಸುವ ಮೂಲಕ ಇಸ್ರೋ ಮೈಲಿಗಲ್ಲನ್ನು ನಿರ್ಮಿಸಿದೆ, ಈ ಐತಿಹಾಸಿಕ ಕ್ಷಣಕ್ಕೆ ವಿಶ್ವವೇ ಸಾಕ್ಷಿಯಾಗಿದೆ.
ಸೌತ್ ಆಫ್ರಿಕಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಇಸ್ರೋ ನೇರ ಪ್ರಸಾರದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ ಯಶಸ್ವಿ ಲ್ಯಾಂಡಿಂಗ್ ಗೆ ಸಂತಸ ವ್ಯಕ್ತಪಡಿಸಿದರು.
ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ ಯೋಜನೆ ಕೈಗೊಂಡ ಜಗತ್ತಿನ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ಮೂಲಕ ಜಾಗತಿಕವಾಗಿ ಭಾರತವನ್ನು ಗುರುತಿಸುವಂತೆ ಅತಿದೊಡ್ಡ ಸಾಧನೆ ಮಾಡಿದ ಇಸ್ರೋದ ಎಲ್ಲಾ ವಿಜ್ಞಾನಿಗಳಿಗೆ ಹಾಗೂ ಅವರ ತಂಡದವರಿಗೆ ಇಡೀ ದೇಶಾದ್ಯಂತ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.