ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಗೃಹ ಸಚಿವ ಪರಮೇಶ್ವರ್

ತುಮಕೂರು : ಕೊರಟಗೆರೆಯಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಮಾತನಾಡುತ್ತಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಯಾರು ಹುಟ್ಟಿಸಿದ್ದು ಎಂದು ವಿವಾದಾತ್ಮಕ ಹೇಳಿಕೆಯನ್ನು ಕೊಟ್ಟು ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಆಡಳಿತಕ್ಕೆ ಬಂದ ದಿನದಿಂದ ಇಲ್ಲಿಯವರೆಗೂ ಸಹ ಹಿಂದೂಗಳ ಬಗ್ಗೆ ಕಾಂಗ್ರೆಸ್ ನ ಶಾಸಕರು, ಸಚಿವರುಗಳು ಕೇವಲವಾಗಿ ಮಾತನಾಡುತ್ತಿದ್ದಾರೆ ಆದರೆ ಅನ್ಯ ಧರ್ಮದವರ ಬಗ್ಗೆ ಇವರುಗಳು ಮಾತನಾಡುವ ಧೈರ್ಯ ಮಾಡುವುದಿಲ್ಲ ಏಕೆ ಎಂಬುದು ಹಿಂದೂಗಳ ಪ್ರಶ್ನೆಯಾಗಿದೆ.

ಇತ್ತೀಚಿಗೆ ತಮಿಳುನಾಡಿನ ಸಿ.ಎಂ ಸ್ಟಾಲಿನ ಪುತ್ರ ಉದಯನಿಧಿ , ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ, ಇದ್ದಂತೆ ಇದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೆಡಿದ್ದರ ಬೆನ್ನಲ್ಲೇ ಈಗ ಕರ್ನಾಟಕ ಸರ್ಕಾರದ ಗೃಹ ಸಚಿವ ಪರಮೇಶ್ವರ್ ಕೂಡ ಹಿಂದೂ ಪರಂಪರೆಯ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ.

ಯಾರಿಗಾದರೂ ಅವರ ಮುತ್ತಾತನ, ತಾತನ ಹೆಸರು ಗೊತ್ತಿಲ್ಲವೆಂದರೆ ಅವರಿಗೆ ತಾತ-ತಂದೆಯಿಲ್ಲ ಎಂದಲ್ಲ, ಅವರಿಗೆ ಆ ಬಗ್ಗೆ ಜ್ಞಾನವಿಲ್ಲ ಎಂದಷ್ಟೇ. ಪಾಪ ಪರಮೇಶ್ವರ ಅವರ ಸ್ಮೃತಿ I.N.D.I ಮೈತ್ರಿಕೂಟದ ಪ್ರಭಾವದಿಂದಾಗಿ ಕೊಂಚ ಪಲ್ಲಟವಾದ ಹಾಗಿದೆ.

ಹಿಂದೂ ಧರ್ಮ ಒಬ್ಬ ಪುರುಷ ಅಥವಾ ಒಂದು ಪುಸ್ತಕದಿಂದ ಹುಟ್ಟಿದ ಧರ್ಮವಲ್ಲ. ಅದಕ್ಕೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ. ಇದೊಂದು ಸಹಸ್ರಾರು ವರ್ಷಗಳಿಂದ ನಡೆದು ಬಂದ, ಬಹು ಉಪಾಸನಾ ವಿಧದ ಜೀವನ ಪದ್ಧತಿ ಎಂಬ ಕಾರಣಕ್ಕೇ ಇದು ಸನಾತನ ಧರ್ಮ ಮತ್ತು ಭಾರತ ಸನಾತನ ಭೂಮಿ.

ಔರಂಗಜೇಬನಿಂದ ಹಿಡಿದು ಉದಯನಿಧಿ ಸ್ಟಾಲಿನ್‌ವರೆಗೆ ಅವೆಷ್ಟೋ ದಾಳಿಕೋರರನ್ನು ಈ ಮಣ್ಣು ಕಂಡ ಮೇಲೂ ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಧರ್ಮ ಜಿಜ್ಞಾಸೆಗಿಂತಲೂ ಹೆಚ್ಚು ಸದ್ಯಕ್ಕೆ ನಿಮ್ಮ ಪಕ್ಷದಲ್ಲೇ ನಿಮ್ಮ ಅಸ್ತಿತ್ವ ಉಳಿಸಿಕೊಳ್ಳುವ ಕಡೆಗೆ ಹೆಚ್ಚಿನ ಗಮನ ಕೊಡುವುದು ನಿಮ್ಮ ವೈಯಕ್ತಿಕ ಹಿತ ದೃಷ್ಟಿಯಿಂದ ಒಳಿತು‌. ಎಂದು ಬಿಜೆಪಿ ಟ್ವೀಟ್ ಮಾಡಿದೆ.